ಬೆಂಗಳೂರು: ನಗರದಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗೆ ಹಾಸಿಗೆ ಕೊರತೆ ಇಲ್ಲ. ಯಾರೂ ಆತಂಕ ಪಡಬೇಕಾದ ಅಗತ್ಯವಿಲ್ಲ. ತುರ್ತು ಚಿಕಿತ್ಸಾ ವ್ಯವಸ್ಥೆಯೂ ಸಾಕಷ್ಟು ಸುಧಾರಿಸಿದೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದರು. ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳಿಂದ 6,000 ಹಾಸಿಗೆಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ 2,500 ಹಾಸಿಗೆಗಳನ್ನು ಈಗಾಗಲೇ ಕೊರೊನಾ ಸೋಂಕಿತರ ಚಿಕಿತ್ಸೆಗೆ ಬಳಸಲಾಗುತ್ತಿದೆ ಎಂದರು.
NEWS DESK
TIMES OF BENGALURU