ಬೆಂಗಳೂರು: ಕೋವಿಡ್-19 ಸೋಂಕಿನ ಎರಡನೇ ಅಲೆಯ ಕಾರಣದಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕು ತಡೆಗೆ ಈಗಾಗಲೇ ಕೆಲವು ನಗರಗಳಲ್ಲಿ ರಾತ್ರಿ ಕಫ್ರ್ಯೂ ಜಾರಿ ಮಾಡಲಾಗಿದೆ. ಆದರೆ ಇದರ ನಡುವೆ ಆರೋಗ್ಯ ಸಚಿವ ಡಾ|ಕೆ. ಸುಧಾಕರ್ ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಆರಂಭವಾಗುವ ಬಗ್ಗೆ ಮುನ್ಸೂಚನೆ ನೀಡಿದ್ದಾರೆ.
ಕೋವಿಡ್ ಲಸಿಕೆ ಹಾಕಿಸಿಕೊಂಡ ಮೇಲೂ ಕೆಲವರಿಗೆ ಸೋಂಕು ಬಂದಿದೆ. ಬರುವುದಿಲ್ಲವೆಂದು ನಾವು ಹೇಳಿಲ್ಲ. ಆದರೆ ಸಾವಿನ ಪ್ರಮಾಣ ಕಡಿಮೆ ಆಗಲಿದೆ. ಮುಂದೆ ಬರುವ ಮೂರನೇ ಅಲೆಯನ್ನು ಇದರಿಂದ ತಪ್ಪಿಸಿಕೊಳ್ಳಬಹುದು ಎಂದು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಸುಧಾಕರ್ ಹೇಳಿದರು.
NEWS DESK
TIMES OF BENGALURU