ಸಿಎಂ ಯಡಿಯೂರಪ್ಪಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ಬೆಳಗಾವಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಬಿಎಸ್ ವೈ ಅವರು ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂದು ರಾಮಯ್ಯ ಆಸ್ಪತ್ರೆನಲ್ಲಿ ಜನರಲ್ ಚೆಕಪ್ ಗೆ ಹೋಗಿದ್ದರು. ಅಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು ವರದಿಯಲ್ಲಿ ಪಾಸಿಟಿವ್ ಬಂದಿದೆ. ಈ ಕಾರಣದಿಂದ ಮುಖ್ಯಮಂತ್ರಿಗಳನ್ನು ಮಣಿಪಾಲ್ ಆಸ್ಪತ್ರೆ ಗೆ ಶಿಪ್ಟ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿದೆ.

NEWS DESK

TIMES OF BENGALURU