ದರೋಡೆ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್

ಬೆಂಗಳೂರು: ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನವೆಸಗುತ್ತಿದ್ದ ಆರೋಪಿಗಳ ಬಂಧನ. ನಗದು ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ಕದ್ದು, ಮನೆಯಲ್ಲಿದ್ದ ಸಿಸಿಟಿವಿ ಫೂಟೇಜ್ ಡಿವಿಆರ್ ಕಿತ್ತು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗದೆ.

ಇನ್ನು ಕಳೆದ 9 ತಾರೀಕಿನಂದು ದಾರಿಹೋಕರಿಗೆ ಚಿನ್ನಾಭರಣ ಮಾರುವಾಗ ಅನುಮಾನದಿಂದ ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆ ನಡೆಸಿದಾಗ ಆರೋಪಿಗಳು ರಾತ್ರಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡು ಹಗಲು ದರೋಡೆ ಮಾಡುವುದಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ಬಂಧಿತ ಆರೋಪಿಗಳಿಂದ 2 ಲಕ್ಷ ಮೌಲ್ಯದ 29ಗ್ರಾಂ ಚಿನ್ನ, 1 ಕೆಜಿ ಬೆಳ್ಳಿ ಹಾಗೂ 4 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ. ಸದ್ಯ ಬಂಧಿತರ ವಿರುದ್ಧ ಮಾರತ್ ಹಳ್ಳಿ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

NEWS DESK

TIMES OF BENGALURU