ರೂಲ್ಸ್ ಬ್ರೇಕ್ ಮಾಡಿದ್ರೆ ಮುಲಾಜಿಲ್ಲದೆ ಕ್ರಮ

ಬೆಂಗಳೂರು:  ಕೋವಿಡ್ ಪ್ರಕರಣಗಳು ನಗರದಲ್ಲಿ ದಿನೇ ದಿನೇ ಹೆಚ್ಚಾಗುತ್ತಿವೆ. ಸೋಂಕು ತಡೆಗಟ್ಟುವ ಸಲುವಾಗಿ ಎಲ್ಲರೂ ಎಚ್ಚರಿಕೆಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಪ್ರತಿಯೊಬ್ಬರು ಮಾಸ್ಕ್ ಹಾಕಿಕೊಳ್ಳಬೇಕು, ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲನೆ ಮಾಡುವ ಮೂಲಕ ಮಾರ್ಗಸೂಚಿಗಳನ್ನು ಅನುಸರಿಸಬೇಕು .

ಯಾರಾದರೂ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಮುಲಾಜಿಲ್ಲದೆ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಿದ್ದೇವೆ ಎಂದು ನಗರ ಪೊಲೀಸ್‍ ಆಯುಕ್ತ ಕಮಲ್ ಪಂತ್ ಎಚ್ಚರಿಸಿದ್ದಾರೆ. ಸಾರ್ವಜನಿಕ ಸಭೆ-ಸಮಾರಂಭ, ಪ್ರತಿಭಟನೆ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕೆಂದು ಹೇಳಿದರು. ಸರ್ಕಾರದ ಆದೇಶ ಹಾಗೂ ಮಾರ್ಗಸೂಚಿಗಳನ್ನು ನೋಡಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಆಯಾಯ ಸಮಯಕ್ಕೆ ಏನು ಆದೇಶ ಬರುತ್ತದೆಯೋ ಅದನ್ನು ಪಾಲಿಸುತ್ತೇವೆ ಎಂದು ಆಯುಕ್ತರು ತಿಳಿಸಿದರು.

NEWS DESK

TIMES OF BENGALURU