ಮೇ.15ರವರೆಗೆ ಪ್ರವಾಸಿಗರಿಗಿಲ್ಲ ಪ್ರವೇಶ

ಬೆಂಗಳೂರು: ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ದೇಶಾದ್ಯಂತ ಕೇಂದ್ರ ಸರ್ಕಾರದ ಅಡಿಯಲ್ಲಿನ ಸ್ಮಾರಕಗಳು ಮತ್ತು ವಸ್ತುಸಂಗ್ರಹಾಲಯಗಳನ್ನು ಮೇ.15ರವರೆಗೆ ಮುಚ್ಚುವಂತೆ ಆದೇಶಿಸಿದೆ.

ಈ ಕುರಿತಂತೆ ಆಕ್ರ್ಯಾಲಜಿ ಆಫ್ ಇಂಡಿಯಾದ ನಿರ್ದೇಶಕರಾದಂತ ಎನ್.ಕೆ.ಪಾಟಕ್ ಆದೇಶ ಹೊರಡಿಸಿದ್ದು, ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನಲೆಯಲ್ಲಿ ಕೂಡಲೇ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವಂತ ಮಾನ್ಯೂಮೆಂಟ್, ಮ್ಯೂಸಿಯಂಗಳನ್ನೂ ಕೂಡಲೇ ಮೇ.15ರವರೆಗೆ ಮುಚ್ಚುವಂತೆ ಆದೇಶಿಸಿದ್ದಾರೆ.

NEWS DESK

TIMES OF BENGALURU