ಸರ್ವಪಕ್ಷ ಸಭೆ ಮುಂದೂಡಿಕೆ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆಗೂ ಮುನ್ನವೇ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಏಪ್ರಿಲ್ 18 ರ ನಾಳೆ ಸರ್ವಪಕ್ಷ ಸಭೆ ಕರೆಯಲಾಗಿತ್ತು.

ಆದರೆ ನಿನ್ನೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳೇ ಕೊರೊನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಪ್ರಕಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

NEWS DESK

TIMES OF BENGALURU