ಸಿಎಂ ಆರೋಗ್ಯವಾಗಿದ್ದಾರೆ

ಬೆಂಗಳೂರು : ಕೊರೋನಾ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆರೋಗ್ಯವಾಗಿದ್ದಾರೆ. ಅವರಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರು ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾರೆ .

ಈ ಕುರಿತಂತೆ ಸುದ್ದಿಗಾರಿಗೆ ಪ್ರತಿಕ್ರಿಯಿಸಿದಂತ ಅವರು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ. ವೈದ್ಯರು ಎಲ್ಲಾ ರೀತಿಯ ಪರೀಕ್ಷೆಯನ್ನು ಮಾಡಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿರುವಂತ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದರು.

NEWS DESK

TIMES OF BENGALURU