ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ತಗಲಿದ್ದು ಚಿಕಿತ್ಸೆ ಪಡೆಯಲು ಮಣಿಪಾಲ್ ಆಸ್ಪತ್ರೆ ಸೇರಬಯಸಿದ ಅವರಿಗೆ ಬೆಡ್ ಸಿಕ್ಕಿಲ್ಲ. ಕುಮಾರಸ್ವಾಮಿಯಂತಹ ಪ್ರಭಾವಿ ನಾಯಕರಿಗೇ ಈ ಸ್ಥಿತಿ ಬಂದಿರುವಾಗ ಸೋಂಕು ತಗಲಿರುವ ಸಾಮಾನ್ಯ ಜನ ಚಿಕಿತ್ಸೆಗಾಗಿ ಬೆಡ್ ಪಡೆಯಲು ಏನು ಮಾಡಬೇಕು.? ಎಂಬ ಮಾತು ಕೇಳಿ ಬರತೊಡಗಿದೆ.
ಇಂದು ಬೆಳಿಗ್ಗೆ ವೈದ್ಯರನ್ನು ಸಂಪರ್ಕಿಸಿ ತಪಾಸಣೆಗೊಳಗಾದ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ಧೃಢಪಟ್ಟಿದೆ. ಹೀಗಾಗಿ ವೈದ್ಯರ ಬಳಿ ಮಾತುಕತೆ ನಡೆಸಿ,ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದು ಚಿಕಿತ್ಸೆ ಪಡೆಯುವುದಾಗಿ ಅವರು ಹೇಳಿದ್ದಾರಾದರೂ ವೈದ್ಯರು ಅದನ್ನೊಪ್ಪಿಲ್ಲ.ಈ ವಿಷಯದಲ್ಲಿ ರಿಸ್ಕ್ ಬೇಡ.ಹೀಗಾಗಿ ತಕ್ಷಣವೇ ಆಸ್ಪತ್ರೆಗೆ ಅಡ್ಮಿಟ್ ಆಗಿ ಎಂದವರು ಹೇಳಿದ್ದಾರೆ. ಹೀಗಾಗಿ ಮಣಿಪಾಲ್ ಆಸ್ಪತ್ರೆ ಸೇರಲು ನಿರ್ಧರಿಸಿದ ಅವರು ಸಂಬಂಧಿಸಿದವರನ್ನು ಸಂಪರ್ಕಿಸಿದರೆ, ಬೆಡ್ ಇಲ್ಲ ಎಂಬ ಉತ್ತರ ಸಿಕ್ಕಿದೆ.
ಈ ಮಧ್ಯೆ ವಿಷಯ ತಿಳಿದ ಕೂಡಲೇ ಆರೋಗ್ಯ ಸಚಿವ ಸುಧಾಕರ್ ಅವರು ಕುಮಾರಸ್ವಾಮಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ದೊರಕಿಸಿಕೊಡಲು ಯತ್ನಿಸಿದ್ದಾರಾದರೂ ಅದು ಫಲ ಕೊಟ್ಟಿಲ್ಲ. ಹೀಗಾಗಿ ಕುಮಾರಸ್ವಾಮಿ ಅವರು ಮತ್ತೊಂದು ಖಾಸಗಿ ಆಸ್ಪತ್ರೆಗೆ ಫೋನು ಮಾಡಿದ್ದರ ಫಲವಾಗಿ ಬೆಡ್ ಸಿಕ್ಕಿದೆ. ಆದರೆ ಹೆಚ್.ಡಿ.ಕುಮಾರಸ್ವಾಮಿ ಯವರು ಆಡ್ಮಿಟ್ ಹಾಗಿಲ್ಲ ಎನ್ನಲಾಗುತ್ತಿದೆ.
NEWS DESK
TIMES OF BENGALURU