ಕೋವಿಡ್ ಕೇಸ್; ದಂಗಾದ ಪೊಲೀಸ್ ಇಲಾಖೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸುತ್ತಿದ್ದು, ಅದರಲ್ಲಿಯೂ ಪೊಲೀಸ್ ಸಿಬ್ಬಂದಿಗಳಲ್ಲಿ ದಿನದಿಂದ ದಿನಕ್ಕೆ ಕಂಡು ಬರುತ್ತಿರುವ ಕೋವಿಡ್ ಪಾಸಿಟಿವ್ ಕೇಸ್ ಕಂಡು ಪೊಲೀಸ್ ಇಲಾಖೆಯೇ ದಂಗಾಗಿದೆ. ಸಿಲಿಕಾನ್ ಸಿಟಿಯಲ್ಲಿ ಬರೋಬ್ಬರಿ 89 ಪೊಲೀಸರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ದಿನದಿಂದ ದಿನಕ್ಕೆ ಇಲಾಖೆಯಲ್ಲಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಮುಂಜಾಗೃತಾ ಕ್ರಮ ಕೈಗೊಂಡರೂ ಸೋಂಕು ಹರಡುತ್ತಿರುವುದು ಆತಂಕವನ್ನು ಹೆಚ್ಚಿಸಿದೆ.

NEWS DESK

TIMES OF BENGALURU