ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಳ ಹಿನ್ನಲೆಯಲ್ಲಿ, ಕೊರೋನಾ ನಿಯಂತ್ರಣ ತಡೆಗಾಗಿ ಇದೀಗ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಈ ಮೂಲಕ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಿದೆ.

ಈ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಕೊರೋನಾ ವೈರಸ್ 2ನೇ ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ, ಪ್ರತಿಯೊಂದು ಹಂತದಲ್ಲಿಯೂ ಸಹ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆ ಇರುತ್ತದೆ.

NEWS DESK

TIMES OF BENGALURU