ಬೆಂಗಳೂರಲ್ಲಿ ಇಂದಿನಿಂದಲೇ ಕಠಿಣ ನಿಯಮ ಜಾರಿ.?

ಬೆಂಗಳೂರಲ್ಲಿ ಇಂದಿನಿಂದಲೇ ಕಠಿಣ ನಿಯಮ ಜಾರಿ.?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದಲೇ ಕಠಿಣ ನಿಯಮ ಜಾರಿಯಾಗುತ್ತದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಕುರಿತು ಬಹಳ ಪ್ರಚಾರ ಆಗುತ್ತಿದೆ. ಆದರೆ ಕೊರೊನಾ ನಿಯಂತ್ರಣಕ್ಕೆ ಲಾಕ್‍ಡೌನ್ ಒಂದೇ ಪರಿಹಾರವಲ್ಲ.

ಬಿಗಿಯಾದ ಕ್ರಮಗಳು ಆಗಬೇಕು. ಈ ಹಿನ್ನೆಲೆಯಲ್ಲಿ ವಿಶೇಷವಾಗಿ ಕ್ರಮ ತೆಗೆದುಕೊಳ್ಳಬೇಕಿದೆ. ಕೆಲವು ಚಟುವಟಿಕೆಗಳಿಗೆ ಕಡಿವಾಣ ಹಾಕಲೇಬೇಕಾಗುತ್ತದೆ ಎಂದು ಹೇಳಿದ್ದಾರೆ. ಕೊರೊನಾ ನಿಯಂತ್ರಣ ಸಂಬಂಧ ಇಂದು ಉನ್ನತ ಮಟ್ಟದ ಸಭೆ ನಡೆಯಲಿದ್ದು, ಕೊರೊನಾಗೆ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಬಿಎಸ್‍ವೈ ಕೂಡ ಆಸ್ಪತ್ರೆಯಿಂದಲೇ ವಿಡಿಯೋ ಕಾನ್ಫರನ್ಸ್ ಮೂಲಕ ಭಾಗವಹಿಸುತ್ತಾರೆ. ಇಂದೇ ಬೆಂಗಳೂರಿಗೆ ಸಂಬಂಧಪಟ್ಟ ಕಠಿಣ ನಿಯಮ ಜಾರಿಯಾಗಬಹುದು ಎಂದು ತಿಳಿಸಿದ್ದಾರೆ.

 

NEWS DESK

TIMES OF BENGALURU