ಸಾರಿಗೆ ನೌಕರರು ಮುಷ್ಕರ ಕೈಬಿಡುವಂತೆ ಮನವಿ

ಸಾರಿಗೆ ನೌಕರರು ಮುಷ್ಕರ ಕೈಬಿಡುವಂತೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಕೈಬಿಡುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಹಳ್ಳಿ ಅವರು, ಸಿಎಂ ಬಿಎಸ್‍ವೈ ಆಸ್ಪತ್ರೆಯಲ್ಲಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಕೂಡ ಕ್ವಾರಂಟೈನ್‍ನಲ್ಲಿದ್ದಾರೆ. ಎಲ್ಲರ ಜೊತೆಗೆ ಚರ್ಚೆ ನಡೆಸುವುದಾಗಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಎಂದರು.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಕಾರಣದಂದ ಮುಷ್ಕರ ಕೈಬಿಡಿ ಎಂದು ಅಫೀಲ್ ಮಾಡಿದ್ದಾರೆ. ಸಾರಿಗೆ ಸಚಿವರು ಎರಡು ದಿನದಲ್ಲಿ ಬರ್ತಾರೆ. ಅವರು ಬಂದ ಬಳಿಕ ಸಾರಿಗೆ ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ತೇವೆ ಎಂದು ತಿಳಿಸಿದ್ದಾರೆ.

NEWS DESK

TIMES OF BENGALURU