ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ

ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ

ಬೆಂಗಳೂರು : ಕೊರೊನಾ ಎರಡನೇ ಅಲೆ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ 30 ಸಾವಿರ ಕೋಟಿ ರೂ. ಮೀಸಲಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ದಿನೇ ದಿನೇ ಗಂಭೀರವಾಗುತ್ತಿದೆ. ಸೋಂಕಿತರಿಗೆ ಬೆಡ್‍ಗಳು ಸಿಗುತ್ತಿಲ್ಲ. ಐಸಿಯು, ರೆಮ್‍ಡಿಸಿವಿಯರ್ ಲಸಿಕೆ, ಆಮ್ಲಜನಕ ಅಭಾವ ಸೃಷ್ಟಿಯಾಗಿವೆ. ಸರ್ಕಾರ ಕೂಡಲೇ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿ, ಆ ಹಣವನ್ನು ಕೊರೊನಾ ನಿಯಂತ್ರಣಕ್ಕೆ ವಿನಿಯೋಗಿಸಬೇಕು. ಸಮರೋಪಾದಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಅತಿ ಹೆಚ್ಚು ವೈದ್ಯಕೀಯ ಕಾಲೇಜುಗಳಿವೆ. ಸಾಕಷ್ಟು ಪ್ರಮಾಣದಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿಗಳಿದ್ದಾರೆ. ಈ ಎಲ್ಲ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಪ್ರತಿಯೊಬ್ಬರಿಗೂ ಉಚಿತ ಚಿಕಿತ್ಸೆ ಸಿಗುವಂತಾಗಬೇಕು. ಪರೀಕ್ಷೆ ಪ್ರಮಾಣ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಕನಿಷ್ಠ ಪಕ್ಷ 30 ಸಾವಿರ ಕೋಟಿಯನ್ನಾದರೂ ಮೀಸಲಿಡಬೇಕು ಎಂದು ಶಿವಕುಮಾರ್ ಅವರು ಕೇಳಿಕೊಂಡಿದ್ದಾರೆ.

NEWS DESK

TIMES OF BENGALURU