251 ತರಬೇತಿ ಸಿಬ್ಬಂದಿಗಳಿಗೆ ಗೇಟ್ ಪಾಸ್

251 ತರಬೇತಿ ಸಿಬ್ಬಂದಿಗಳಿಗೆ ಗೇಟ್ ಪಾಸ್

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರು ನಡೆಸುತ್ತಿರುವಂತ ಮುಷ್ಕರ ಇಂದಿಗೆ 13ನೇ ದಿನಕ್ಕೆ ಕಾಲಿಟ್ಟಿದೆ. 6ನೇ ವೇತನ ಆಯೋಗದಂತೆ ವೇತನ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮುಷ್ಕರದಲ್ಲಿ ನಿರತರಾಗಿದ್ದ ತರಬೇತಿ ಸಿಬ್ಬಂದಿಗಳಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿತ್ತು.

ಆದರೂ ಸಹ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೆ ಅನಧಿಕೃತವಾಗಿ ಗೈರು ಹಾಜರಾಗಿರುತ್ತಾರೆ. ಇದರಿಂದಾಗಿ ಸಾರ್ವಜನಿಕ ಪ್ರಯಾಣಿಕರಿಗೆ ಸಾರಿಗೆ ಸೇವೆಯಲ್ಲಿ ವ್ಯತ್ಯಯ ಉಂಟಾಗಲು ಕಾರಣರಾಗಿರುತ್ತಾರೆ. ಹೀಗೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೇ ಅನಧಿಕೃತವಾಗಿ ಗೈರು ಹಾಜರಾಗಿರುವಂತ 251 ತರಬೇತಿ ಸಿಬ್ಬಂದಿಗಳನ್ನು ಕೂಡಲೇ ಜಾರಿಗೆ ಬರುವಂತೆ ಆಯ್ಕೆ ಪಟ್ಟಿಯಿಂದ ತೆಗೆದುಹಾಕಲಾಗಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ.

NEWS DESK
TIMES OF BENGALURU