ಕೊರೊನಾ ಹೆಚ್ಚಳ; ನಾಳೆ ಸರ್ವಪಕ್ಷ ಸಭೆ
ಬೆಂಗಳೂರು: ಕೊರೊನಾ ಮಹಾಮಾರಿ ರಣಕೇಕೆ ಹಾಕುತ್ತಿರುವ ಹಿನ್ನೆಲೆಯಲ್ಲಿ ಕಂಡುಕೊಳ್ಳಬೇಕಾದ ಮಾರ್ಗೋಪಾಯದ ಕುರಿತಾಗಿ ನಾಳೆ ಮಹತ್ವದ ಸರ್ವಪಕ್ಷ ಸಭೆ ನಡೆಯಲಿದೆ. ವಚ್ರ್ಯುಲ್ ಮೂಲಕ ನಡೆಯಲಿರುವ ಈ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಆರ್. ಅಶೋಕ್, ಡಾ. ಕೆ. ಸುಧಾಕರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.
ಭಾನುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಬೇಕಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೊರೊನಾ ಪಾಟಿಸಿಟಿವ್ ಕಾಣಿಸಿಕೊಂಡಿರುವುದರಿಂದ ಅನಿವಾರ್ಯವಾಗಿ ಸಭೆಯನ್ನು ಮುಂದೂಡಲಾಗಿತ್ತು. ಇದೀಗ ನಾಳೆ ವಚ್ರ್ಯುಲ್ ಮೂಲಕ ಸರ್ವಪಕ್ಷ ಸಭೆ ನಡೆಯಲಿದ್ದು, ಎಲ್ಲರ ಅಭಿಪ್ರಾಯದಂತೆ ಸರ್ಕಾರ ಸ್ಪಷ್ಟವಾದ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.
NEWS DESK
TIMES OF BENGALURU