ಕೋವಿಡ್ ಪ್ರಕರಣ; ಬೆಂಗಳೂರಿಗೆ ಪ್ರತ್ಯೇಕ ನಿಯಮ.?

ಕೋವಿಡ್ ಪ್ರಕರಣ; ಬೆಂಗಳೂರಿಗೆ ಪ್ರತ್ಯೇಕ ನಿಯಮ.?

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಜನರು ಗುಂಪು ಸೇರೋದ್ರಿಂದಲೇ ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುತ್ತಿದೆ ಎಂದು ಹೇಳಿದ್ದಾರೆ. ರಾತ್ರೋ ರಾತ್ರಿ ವೈದ್ಯರನ್ನು, ಆರೋಗ್ಯ ಕಾರ್ಯಕರ್ತರನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ಬೆಂಗಳೂರಿಗೆ ಪ್ರತ್ಯೇಕ ನಿಯಮ ತರುತ್ತೇವೆ. ಕೋವಿಡ್ ಹೆಚ್ಚಿರುವ ಉಳಿದ ಜಿಲ್ಲೆಗಳಿಗೆ ಪ್ರತ್ಯೇಕ ನಿಯಮಗಳನ್ನು ಜಾರಿಗೊಳಿಸುತ್ತೇವೆ. ಇಂದು ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ. ಸಭೆಯಲ್ಲಿ ಕಠಿಣ ನಿಯಮಗಳ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

NEWS DESK
TIMES OF BENGALURU