ರಾಜ್ಯದಲ್ಲಿ ಇಂದಿನಿಂದಲೇ ಟಫ್ ರೂಲ್ಸ್ ಜಾರಿ

ರಾಜ್ಯದಲ್ಲಿ ಇಂದಿನಿಂದಲೇ ಟಫ್ ರೂಲ್ಸ್ ಜಾರಿ

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ರಾಜ್ಯಪಾಲರು ಇಂದು ಸರ್ವಪಕ್ಷ ಸಭೆ ಕರೆದಿದ್ದು, ಸಭೆ ಮುಗಿಯುತ್ತಿದ್ದಂತೆಯೇ ರಾಜ್ಯದಲ್ಲಿ ಕಠಿಣ ನಿಯಮ ಜಾರಿಯಾಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇಂದಿನಿಂದಲೇ ಟಫ್ ರೂಲ್ಸ್ ಜಾರಿಗೆ ಬರಲಿದೆ. ಎಲ್ಲಾ ರಾಜ್ಯಗಳಲ್ಲೂ ರಾಜ್ಯಪಾಲರೇ ಸಭೆ ಕರೆದು ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಗೆ ತರುತ್ತಿದ್ದಾರೆ ಎಂದರು. ರಾಜ್ಯಪಾಲರು ಕರೆದಿರುವ ಸಭೆಗೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಪ್ರಧಾನಿ ಮೋದಿ ಸೂಚನೆ ಮೇರೆಗೆ ಎಲ್ಲಾ ರಾಜ್ಯಗಳ ರಾಜ್ಯಪಾಲರೂ ಸಿಎಂ, ಸಚಿವರು, ವಿಪಕ್ಷ ನಾಯಕರ ಸಭೆ ಕರೆಯುತ್ತಿದ್ದು, ಸಭೆಯಲ್ಲಿ ಚರ್ಚಿಸಿ ಕಠಿಣ ನಿಯಮಗಳನ್ನು ಜಾರಿ ಮಾಡುತ್ತಿದ್ದಾರೆ ಎಂದು ಹೇಳಿದರು.

NEWS DESK
TIMES OF BENGALURU