ಮೌಲ್ಯಾಂಕನ ಮೂಲಕ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

ಮೌಲ್ಯಾಂಕನ ಮೂಲಕ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿವರೆಗೆ ಮೌಲ್ಯಾಂಕನ ಮೂಲಕ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಸರ್ಕಾರ ನಿರ್ಧಾರ ಮಾಡಿರುವುದಾಗಿ ಶಿಕ್ಷಣ ಸಚಿವ ಎಸ್​. ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಪರೀಕ್ಷೆ ಇಲ್ಲದೆಯೇ ಪಾಸ್ ಅನ್ನೋ ವಿಚಾರಕ್ಕೆ ಸಚಿವ ಎಸ್​ ಸುರೇಶ್ ಕುಮಾರ್ ಅವರು ಮಾಧ್ಯಮದವರಿಗೆ ಸ್ಪಷ್ಟನೆ ನೀಡಿದ್ದು, ಮೌಲ್ಯಾಂಕನ ವಿಶ್ಲೇಷಣೆ ಮಾಡಿ ಉತ್ತೀರ್ಣಗೊಳಿಸಲು ಸೂಚನೆ ನೀಡಲಾಗಿದೆ. ಮಕ್ಕಳ ಕಲಿಕಾ ಪ್ರಗತಿ, ಮಕ್ಕಳಿಗೆ ನೀಡಿದ್ದ ಪ್ರಬಂಧ, ಗೃಹ ಕೆಲಸ ಇತರೆ ಆಧಾರದ ಮೇಲೆ ಉತ್ತೀರ್ಣ ಮಾಡಲು ಸೂಚಿಸಲಾಗಿದೆ.

1ರಿಂದ 5ನೇ ತರಗತಿ ಮಕ್ಕಳ ಹಿಂದಿನ ಕಲಿಕೆ ಆಧಾರದ ಮೇಲೆ ಉತ್ತೀರ್ಣ ಮಾಡಲು ಆದೇಶಿಸಲಾಗಿದೆ. ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದಾರೆ. 1ರಿಂದ 9ನೇ ತರಗತಿ ಮಕ್ಕಳಿಗೆ ಮೇ. 1ರಿಂದ ಜೂ.​ 14ರ ವರೆಗೆ ಬೇಸಿಗೆ ರಜೆ ಘೋಷಿಸಲಾಗಿದೆ. ಜೂ. 15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಪ್ರೌಢಶಾಲೆ ಶಿಕ್ಷಕರಿಗೆ ಜೂ. 15ರಿಂದ ಜು. 14ರ ವರೆಗೆ ರಜೆ ಇರುತ್ತದೆ ಎಂದು ಬೆಂಗಳೂರಿನಲ್ಲಿ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

NEWS DESK
TIMES OF BENGALURU