ಕೋವಿಡ್ ವಿಚಾರದಲ್ಲಿ ರಾಜಕಾರಣ ಸರಿಯಲ್ಲ

ಕೋವಿಡ್ ವಿಚಾರದಲ್ಲಿ ರಾಜಕಾರಣ ಸರಿಯಲ್ಲ

ಬೆಂಗಳೂರು: ಕೋವಿಡ್ ವಿಚಾರದಲ್ಲಿ ರಾಜಕಾರಣ ಮಾಡುತ್ತಾ ಕೂರುವುದು ಸರಿಯಲ್ಲ. ಇಂತಹ ಸಂಕಷ್ಟದಲ್ಲಿ ಎಲ್ಲರೂ ಒಗ್ಗೂಡಿ ಕೋವಿಡ್ ನಿಯಂತ್ರಿಸುವ ಅಗತ್ಯವಿದೆ ಎಂದು ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಎಲ್ಲ ವಿಚಾರದಲ್ಲೂ ದೋಷಗಳನ್ನು ಎತ್ತಿ ಹಿಡಿದು ರಾಜಕಾರಣ ಮಾಡುತ್ತಾ ಕೂರುವುದು ಎಷ್ಟು ಸರಿ. ಪ್ರಧಾನಿ ಮೋದಿಯವರು ಎಲ್ಲ ರಾಜ್ಯಗಳ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ರಾಜ್ಯಪಾಲರ ನೇತೃತ್ವದಲ್ಲಿ ಸಭೆ ನಡೆಸಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದ್ದರು. ಆ ಪ್ರಕಾರ ಸಭೆ ಕರೆಯಲಾಗಿದೆ ಎಂದರು.

ರಾಜ್ಯಪಾಲರು ಸರ್ವಪಕ್ಷಗಳ ಸಭೆಯ ನೇತೃತ್ವ ವಹಿಸಿದರೆ ತಪ್ಪೇನು.? ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಅಲ್ಲಿ ರಾಜ್ಯಪಾಲರ ನೇತೃತ್ವದಲ್ಲಿ ಸಭೆ ನಡೆಸಿದರೆ, ರಾಜ್ಯಪಾಲರ ಆಡಳಿತ ಹೇರಿಕೆ ಆಗಿದೆ ಎಂದು ಅರ್ಥವೇ.? ಎಂದು ಪ್ರಶ್ನಿಸಿದ ಅವರು, ಎಲ್ಲ ವಿಚಾರಗಳಲ್ಲೂ ರಾಜಕೀಯ ಮಾಡುತ್ತಾ, ಮೊಸರಲ್ಲಿ ಕಲ್ಲು ಹುಡುಕಬಾರದು ಎಂದು ಬೊಮ್ಮಾಯಿ ಹೇಳಿದರು.

NEWS DESK
TIMES OF BENGALURU