ಸಭೆಗೂ ಮುನ್ನ ಹಿರಿಯ ಸಚಿವರ ಜೊತೆ ಸಿ.ಎಂ. ಚರ್ಚೆ

ಸಭೆಗೂ ಮುನ್ನ ಹಿರಿಯ ಸಚಿವರ ಜೊತೆ ಸಿ.ಎಂ. ಚರ್ಚೆ

ಬೆಂಗಳೂರು: ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷಯಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಗೂ ಮೊದಲು ಮುಖ್ಯಮಂತ್ರಿ ಬಿಎಸ್‍ವೈ ಅವರು ಸಂಪುಟದ ಹಿರಿಯ ಸಚಿವರ ಜೊತೆ ಸಮಾಲೋಚನೆ ನಡೆಸಿದರು. ಮಣಿಪಾಲ್ ಆಸ್ಪತ್ರೆಯಿಂದಲೇ ಯಡಿಯೂರಪ್ಪ ಅವರು ವಿಡಿಯೋ ಸಂವಾದದ ಮೂಲಕ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅದಕ್ಕೂ ಮೊದಲು ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮತ್ತು ಕಂದಾಯ ಸಚಿವ ಆರ್. ಅಶೋಕ್ ಜೊತೆ ಅವರು ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಬೆಂಗಳೂರಿನಲ್ಲಿ ಕೋವಿಡ್ ಪರಿಸ್ಥಿತಿ ಗಂಭೀರವಾಗುತ್ತಿದೆ. ಹೀಗಾಗಿ ಲಾಕ್​ಡೌನ್ ಹೊರತುಪಡಿಸಿ ಏನೆಲ್ಲಾ ಬಿಗಿ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬ ಕುರಿತು ಸಮಾಲೋಚನೆ ನಡೆಸಿದ್ದಾರೆ.

NEWS DESK
TIMES OF BENGALURU