ಸಮಿತಿ ಸಭೆಗಳನ್ನು ರದ್ದುಗೊಳಿಸಿದ ಸರ್ಕಾರ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಮಹಾಮಾರಿ ಅಬ್ಬರಿಸುತ್ತಿದೆ. ದಿನವೊಂದಕ್ಕೆ 20 ಸಾವಿರಕ್ಕೂ ಹೆಚ್ಚು ಕೇಸ್ ಗಳು ಪತ್ತೆಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ವಿಧಾನ ಮಂಡಲ, ವಿಧಾನಸಭೆಯ ಸದಸ್ಯರ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಮಿತಿಗಳ ಸಭೆಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ(ಪ್ರ) ಎಂ.ಕೆ.ವಿಶಾಲಾಕ್ಷಿ ಪ್ರಕಟಣೆ ಹೊರಡಿಸಿದ್ದು, ಕೊರೊನಾ ವೈರಸ್ ನ 2ನೇ ಅಲೆಯು ದೇಶದಲ್ಲಿ, ಅದರಲ್ಲಿಯೂ ವಿಶೇಷವಾಗಿ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನಲೆಯಲ್ಲಿ ಸದಸ್ಯರುಗಳ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ವಿಧಾನಮಂಡಲ, ವಿಧಾನಸಭೆಯ ಎಲ್ಲಾ ಸಮಿತಿಗಳ ಸಭೆಗಳನ್ನು ದಿನಾಂಕ 26-04-2021ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಸ್ಥಗಿತಗೊಳಿಸಲು ಸಭಾಧ್ಯಕ್ಷರು ಆದೇಶಿಸಿರುತ್ತಾರೆಂದು ತಿಳಿಸಿದ್ದಾರೆ.

NEWS DESK

TIMES OF BENGALURU