ಬೆಂಗಳೂರಿನಲ್ಲಿ ಹೆಚ್ಚಾದ ಕಿಲ್ಲರ್ ಕೊರೊನಾ ಆರ್ಭಟ

ಬೆಂಗಳೂರು : ಕರ್ನಾಟಕದಲ್ಲಿ ಮಂಗಳವಾರ ಬರೋಬ್ಬರಿ 21794 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಾಹಿತಿ ನೀಡಿದೆ. ಒಂದೇ ದಿನ 149 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 13646 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ 4571 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 1025821 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯಕ್ಕೆ 159158 ಸಕ್ರಿಯ ಪ್ರಕರಣಗಳಿವೆ, ಒಟ್ಟು 1198644 ಪ್ರಕರಣಗಳಿವೆ. 751 ಮಂದಿ ಐಸಿಯುನಲ್ಲಿದ್ದಾರೆ. ಹೊಸದಾಗಿ ಬೆಂಗಳೂರು ಗ್ರಾಮಾಂತರದಲ್ಲಿ 513, ಬೆಂಗಳೂರು ನಗರಿನಲ್ಲಿ 13782 ಕಂಡು ಬಂದಿದೆ.

NEWS  DESK

TIMES OF BENGALURU