ಏರ್‌ಪೋರ್ಟ್ ಮೆಟ್ರೋ ಯೋಜನೆಗೆ ಕೇಂದ್ರ ಅಸ್ತು

ನವದೆಹಲಿ : ಬೆಂಗಳೂರು ನಗರದಿಂದ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಹುನಿರೀಕ್ಷಿತ ಮೆಟ್ರೋ ಮಾರ್ಗಕ್ಕೆ ಪ್ರಧಾನಿ  ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ದೆಹಲಿಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.

ಸಿಲ್ಕ್ ಬೋರ್ಡ್ ಜಂಕ್ಷನ್‍ನಿಂದ ಕೆ. ಆರ್. ಪುರ ಮತ್ತು ಹೆಬ್ಬಾಳ ಜಂಕ್ಷನ್ ಮೂಲಕ ವಿಮಾನ ನಿಲ್ದಾಣ ನಿಲ್ದಾಣ ತಲುಪುವ 58.19 ಕಿ.ಮೀ. ಉದ್ದನೆಯ ಈ ಮೆಟ್ರೋ ಯೋಜನೆಯ ವೆಚ್ಚ 14,788.1 ಕೋಟಿ ರೂಪಾಯಿ. ಸಂಪುಟ ಸಭೆಯ ನಂತರ ಈ ಬಗ್ಗೆ ಪತ್ರಿಕಾ ಹೇಳಿಕೆಯೊಂದನ್ನು ನೀಡಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಶ್ರೀ ಡಿ ವಿ ಸದಾನಂದ ಗೌಡ ಅವರು ಇದಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಧನ್ಯವಾದ ಅರ್ಪಿಸುವುದಾಗಿ ಹೇಳಿದರು.

NEWS DESK

TIMES OF BENGALURU