ಬೆಂಗಳೂರು: ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಇಂದಿನಿಂದಲೇ ಹೊಸ ಮಾರ್ಗಸೂಚಿ ಜಾರಿಗೆ ಬರಲಿದೆ. ಸರ್ಕಾರದ ಕ್ರಮವನ್ನು ಜನರು ಪಾಲಿಸಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಕರೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಚೈನ್ ಲಿಂಕ್ ಮುರಿಯಲು 14 ದಿನ ಬೇಕು. ಹೀಗಾಗಿ 14 ದಿನ ಸರ್ಕಾರದಿಂದ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಕೊರೊನಾ ಎರಡನೇ ಅಲೆ ವೇಗವಾಗಿ ಹರಡುತ್ತಿದೆ. ಶೇ.95ರಷ್ಟು ಜನರು ಸೋಂಕಿತರಾಗುವ ಸ್ಥಿತಿ ಬರಬಾರದು ಹೀಗಾಗಿ ಸರ್ಕಾರ ಕೈಗೊಂಡಿರುವ ಮಾರ್ಗಸೂಚಿಗಳನ್ನು ಜನರು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದರು.
NEWS DESK
TIMES OF BENGALURU