ಸಾರಿಗೆ ಸಿಬ್ಬಂದಿಗಳು ಕೆಲಸಕ್ಕೆ ಹಾಜರ್

ಬೆಂಗಳೂರು: ಸಾರಿಗೆ ಸಿಬ್ಬಂದಿಗಳು 6ನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಕಳೆದ 15 ದಿನಗಳಿಂದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಈ ಮುಷ್ಕರಕ್ಕೆ ಸಂಬಂಧಿಸಿದಂತೆ ಮಂಗಳವಾರ ಹೈಕೋರ್ಟ್, ಕೋವಿಡ್ ಸಂಕಷ್ಟದ ಸಮಯದಲ್ಲಿ ಮುಷ್ಕರ ಹೂಡುವುದು ಸರಿಯಲ್ಲ, ಅದರಿಂದ ಸಾರ್ವಜನಿಕರ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗಲಿದೆ.

ಕೂಡಲೇ ಸೇವೆ ಆರಂಭಿಸಿ ಎಂದು ಮುಷ್ಕರ ನಿರತ ಸಾರಿಗೆ ನೌಕರರಿಗೆ ಹೈಕೋರ್ಟ್ ಮಂಗಳವಾರ ಸೂಚಿಸಿದ್ದರ ಪರಿಣಾಮ ಹಲವರು ಕೆಲಸಕ್ಕೆ ಹಾಜರ್ ಆಗಿದ್ದಾರೆ. ಇನ್ನೂ ಕೆಲ ನೌಕರ ಮುಖಂಡರು ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಕೆಲವು ಸಿಬ್ಬಂದಿಗಳು ಸ್ವಯಂ ಪ್ರೇರಿತರಾಗಿ ಕೆಲಸಕ್ಕೆ ಹಾಜರಾಗಿದ್ದಾರೆ.

NEWS DESK

TIMES OF BENGALURU