ಬೆಂಗಳೂರು : ನಗರದ ಎಲ್ಲಾ ಚಿತಾಗಾರಗಳಲ್ಲೂ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರವೇರಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಪರೀಕ್ಷೆ ವ್ಯವಸ್ಥೆ, ಆಮ್ಲಜನಕ ದಾಸ್ತಾನು ಮೊದಲಾದ ವಿಚಾರಗಳ ಬಗ್ಗೆ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಬೆಂಗಳೂರಿನ ಕೆಲವೇ ಚಿತಾಗಾರಗಳಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದರಿಂದ ಸಮಸ್ಯೆ ಹೆಚ್ಚಾಗಿತ್ತು. ಮೊದಲೇ ನೊಂದ ಕುಟುಂಬಕ್ಕೆ ಮತ್ತಷ್ಟು ಸಮಸ್ಯೆಯಾಗುವ ಬದಲು ಅವರ ಸಮಸ್ಯೆ ಕಡಿಮೆ ಮಾಡುವ ಉದ್ದೇಶದಿಂದ ಎಲ್ಲಾ 13 ಚಿತಾಗಾರಗಳಲ್ಲೂ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಶವಗಳನ್ನು ಅಂತ್ಯಸಂಸ್ಕಾರ ಮಾಡಲು ತೀರ್ಮಾನಿಸಲಾಗಿದೆ ಎಂದರು.
NEWS DESK
TIMES OF BENGALURU