ಜನರು ಸರ್ಕಾರಕ್ಕೆ ಸಹಕರಿಸಬೇಕು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ನಿಯಂತ್ರಣದ ಕುರಿತು ತಾಂತ್ರಿಕ ಸಮಿತಿ ಸಲಹೆಯಂತೆ ನಿರ್ಧಾರ ಕೈಗೊಳ್ಳಬೇಕೆಂದು ನಾವು ಸರ್ಕಾರಕ್ಕೆ ತಿಳಿಸಿದ್ದೇವೆ. ಸರ್ಕಾರಕ್ಕೆ ಲಾಕ್ ಡೌನ್ ಬಗ್ಗೆ ಆಸಕ್ತಿ ಇತ್ತು ಅನಿಸುತ್ತದೆ. ಆದರೆ ಮಂಗಳವಾರ ಪ್ರಧಾನ ಮಂತ್ರಿಗಳ ಸಂದೇಶದ ಮೇರೆಗೆ ಕೆಲವು ಬದಲಾವಣೆ ಮಾಡಿಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಎಲ್ಲ ವರ್ಗದ ಜನ ಈಗ ಸಹಕಾರ ನೀಡಬೇಕಾದ ಅವಶ್ಯಕತೆ ಇದೆ. ಸರ್ಕಾರದ ವೈಫಲ್ಯದ ಬಗ್ಗೆ ರಾಜ್ಯಪಾಲರ ಸಭೆಯಲ್ಲಿ ಹೇಳಿದ್ದೇವೆ. ಸರ್ಕಾರ ವಿಫಲವಾಗಿದೆ ಎಂಬುದಕ್ಕೆ ಸೋಂಕಿನ ಸಂಖ್ಯೆಗಳೇ ಸಾಕ್ಷಿ. ಪ್ರಧಾನಮಂತ್ರಿಗಳು ಲಸಿಕೆ ವಿಚಾರವಾಗಿ ಹೇಳಿದ ತೀರ್ಮಾನಗಳನ್ನು ಯಾಕೆ ಮುಂಚಿತವಾಗಿ ಮಾಡಿರಲಿಲ್ಲ? ಇದೆಲ್ಲವೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯಗಳನ್ನು ಸಾಬೀತುಪಡಿಸುತ್ತಿವೆ ಎಂದು ಟೀಕಿಸಿದ್ದಾರೆ.

NEWS DESK

TIMES OF BENGALURU