ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಅಂಕೆ ಮೀರಿದ್ದು, ದಾಖಲೆ ಪ್ರಮಾಣದ ಪ್ರಕರಣಗಳು ಇಂದು ವರದಿಯಾಗಿದೆ. ಕಳೆದ 24 ಗಂಟೆಯೊಳಗೆ ರಾಜ್ಯದಲ್ಲಿ 23,558 ಕೊರೊನಾ ಪ್ರಕರಣ ಪತ್ತೆಯಾಗಿದ್ದು, 116 ಜನ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅಂಕಿ ಅಂಶಗಳನ್ನು ಗಮನಿಸಿದರೆ ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣ ಮೀರಿರುವುದು ಸ್ಪಷ್ಟವಾಗಿದೆ.

ರಾಜಧಾನಿಯಲ್ಲಿಯೇ ಇಂದು 13,640 ಮಂದಿ ಸೋಂಕಿಗೆ ತುತ್ತಾಗಿದ್ದು, 70 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿರುವುದು ಮತ್ತಷ್ಟು ಆತಂಕ ಮೂಡಿಸಿದೆ. ರಾಜ್ಯದಲ್ಲಿ ಒಟ್ಟು 1,76,188 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೂ 13,762 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ 544 ಪ್ರಕರಣ ಪತ್ತೆಯಾಗಿದೆ.

NEWS DESK

TIMES  OF BENGALURU