ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಇಲ್ಲ

ಬೆಂಗಳೂರು: ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆಯಿಂದಾಗಿ ಕೊರೊನಾ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇಲ್ಲ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದರು.

ಜಂಬು ಸಿಲಿಂಡರ್ ಗಳಲ್ಲಿ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರೊಂದಿಗೂ ಚರ್ಚಿಸಿದ್ದು, ಈಗಾಗಲೇ ಆಕ್ಸಿಜನ್ ಉತ್ಪಾದಕರ ಜೊತೆ ಮಾತುಕತೆ ನಡೆದಿದೆ. 40,000 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜಾಗಿದೆ. 5,500 ಮೆಟ್ರಿಕ್ ಟನ್ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.

NEWS DESK

TIMES OF BENGALURU