ಅನಗತ್ಯವಾಗಿ ಸಂಚರಿಸುವ ವಾಹನಗಳು ಸೀಜ್

ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ಮೇ ೪ರವರೆಗೆ ನಗರದಾದ್ಯಂತ ಜಾರಿ ಮಾಡಿರುವ ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯದ ಕರ್ಫ್ಯೂ ವೇಳೆ ಅನಗತ್ಯವಾಗಿ ಸಂಚರಿಸುವ ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ವಾರ್ನಿಂಗ್ ಮಾಡಿದ್ದಾರೆ.

ಕರ್ಫ್ಯೂ ಅವಧಿಯಲ್ಲಿ ಯಾವುದೇ ರೀತಿಯ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ. ಈ ವೇಳೆ ಸಂಚಾರಕ್ಕೆ ಪೊಲೀಸ್ ಇಲಾಖೆ ಯಾವುದೇ ಪಾಸ್ ವಿತರಿಸುವುದಿಲ್ಲ. ತುರ್ತು ಅಗತ್ಯ ಇದ್ದವರು ಗುರುತಿನ ಚೀಟಿ ಹಾಗೂ ಸಂಬಂಧಿತ ದಾಖಲೆ ತೋರಿಸಿ ಸಂಚರಿಸಬಹುದು. ಆದರೆ, ಅನಗತ್ಯವಾಗಿ ಸಂಚಾರಕ್ಕೆ ಮುಂದಾಗುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

NEWS DESK

TIMES OF BENGALURU