ಸಾರ್ವಜನಿಕ ಭೇಟಿಗೆ ಸಮಯ ನಿಗದಿ

ಬೆಂಗಳೂರು: ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಬಿಬಿಎಂಪಿ ಕೇಂದ್ರ ಕಚೇರಿಗೆ ಸಾರ್ವಜನಿಕ ಭೇಟಿಗೆ ಮಧ್ಯಾಹ್ನ 3 ರಿಂದ ಸಂಜೆ 5ರವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಜನಪ್ರತಿನಿಧಿಗಳು, ಪತ್ರಕರ್ತರಿಗೆ ಈ ನಿಬರ್ಂಧದಿಂದ ವಿನಾಯಿತಿ ನೀಡಲಾಗಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

NEWS DESK

TIMES OF BENGALURU