ಅನಗತ್ಯವಾಗಿ ಮನೆಯಿಂದ ಆಚೆ ಬರಬೇಡಿ

ಬೆಂಗಳೂರು : ರಾಜ್ಯ ಸರ್ಕಾರ ಹೊರಡಿಸಿ ರುವ ಮಾರ್ಗಸೂಚಿಗೆ ಸಾರ್ವಜನಿಕರು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನವರ ಮನವಿ ಮೇರೆಗೆ ಸಾರ್ವಜನಿಕರು ಹಿಂದಿಗಿಂತಲೂ ಉತ್ತಮವಾಗಿ ಸ್ಪಂದಿಸಿದ್ದಾರೆ.

ಇದು ಮುಂದಿನ ದಿನಗಳಲ್ಲೂ ಮುಂದುವರೆಯಲಿ ಎಂದು ಆಶಿಸಿದರು. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಅನಗತ್ಯವಾಗಿ ಯಾರೊಬ್ಬರೂ ಮನೆಯಿಂದ ಆಚೆ ಬರಬೇಡಿ. ಉದಾಸೀನ ತೋರಿದರೆ ನಿಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಸರ್ಕಾರದ ನಿಯಮಗಳನ್ನು ಪಾಲನೆ ಮಾಡಿ ಎಂದು ಮನವಿ ಮಾಡಿದರು.

NEWS DESK

TIMES OF BENGALURU