ಜಮೀರ್ ಆಹ್ಮದ್‍ಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವ್ರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಅವ್ರು, ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಕಾರಣ ನಿನ್ನೆ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್‍ನಲ್ಲಿ ಇದ್ದೇನೆ ಎಂದಿದ್ದಾರೆ.

NEWS DESK

TIMES OF BENGALURU