ಶವಗಳನ್ನು ಇರಿಸಲು ತಾತ್ಕಾಲಿಕ ವ್ಯವಸ್ಥೆಗೆ ನಿರ್ಧಾರ

ಬೆಂಗಳೂರು: ಕೋವಿಡ್‍ನಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚಿತಾಗಾರಗಳಿಗೆ ಶವ ಸಾಗಿಸುವ ಆಂಬ್ಯುಲೆನ್ಸ್  ಗಳು ತಾಸುಗಟ್ಟಲೇ ಸರದಿಯಲ್ಲಿ ನಿಲ್ಲುತ್ತಿವೆ. ಹೀಗಾಗಿ ಶವಗಳನ್ನು ಇರಿಸಲು ಚಿತಾಗಾರದಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ.

ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಳ್ಳುತ್ತಿದ್ದಂತೆ ಆಡಳಿತದತ್ತ ಕಾರ್ಯೋನ್ಮುಖರಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರು ಕೋವಿಡ್ ನಿರ್ವಹಣೆ ಕುರಿತು ನಗರದ ಸಚಿವರ ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿ ಸಲಹೆ-ಸೂಚನೆ ನೀಡಿದರು. ಅಧಿಕೃತ ನಿವಾಸ ಕಾವೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಬೆಂಗಳೂರಿನ ಕೊರೋನಾ ಸ್ಥಿತಿಗತಿ, ಜಾರಿಗೆ ತಂದಿರುವ ಕಠಿಣ ಮಾರ್ಗಸೂಚಿ ಅನುಷ್ಠಾನ ಕುರಿತು ಮಾಹಿತಿಪಡೆದುಕೊಂಡು ನಿರ್ದೇಶನ ನೀಡಿದ್ದಾರೆ.

NEWS DESK
TIMES OF BENGALORU