ಕೊರೋನಾ ಸಂಕಷ್ಟದಲ್ಲಿರುವವರಿಗೆ ನೆರವಾಗಿ

ಬೆಂಗಳೂರು: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ನೆರವಾಗುವಂತೆ ಕಾಂಗ್ರೆಸ್ ಪಕ್ಷದ ಶಾಸಕರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಕೋವಿಡ್ 2ನೇ ಅಲೆ ರಾಜ್ಯ ಮತ್ತು ರಾಷ್ಟ್ರವನ್ನು ಬಾಧಿಸುತ್ತಿದೆ. ತಜ್ಞರುಗಳು ಮತ್ತು ಪರಿಣಿತರು 2020ರ ನವೆಂಬರ್ ತಿಂಗಳಲ್ಲಿಯೇ ಕೋವಿಡ್ 2ನೇ ಅಲೆ ಫೆಬ್ರವರಿ ಅಥವಾ ಮಾರ್ಚ್ ತಿಂಗಳ ಹೊತ್ತಿಗೆ ತನ್ನ ಭೀಕರತೆಯನ್ನು ಪ್ರದರ್ಶಿಸಲಿದೆ ಎಂದು ಹೇಳಿದ್ದರು.

ಈ ಎಚ್ಚರಿಕೆಗಳನ್ನು ಸರ್ಕಾರಗಳು ಕಸದ ಬುಟ್ಟಿಗೆ ಎಸೆದವು. ಸಮರ್ಪಕವಾಗಿ ಟೆಸ್ಟಿಂಗ್ ಗಳನ್ನು ಸಹ ನಡೆಸುತ್ತಿಲ್ಲ, ನಡೆಸಿದ ಟೆಸ್ಟ್ ವರದಿ ವಾರವಾದರೂ ಜನರ ಕೈಗೆ ವೈದ್ಯರುಗಳ ಕೈಗೆ ಸಿಗುತ್ತಿಲ್ಲ. ಇದೆಲ್ಲದರಿಂದಾಗಿ ಕೋವಿಡ್‍ನಿಂದ ಮರಣ ಹೊಂದುವವರಷ್ಟೆ ಆತಂಕದಿಂದ ಮರಣ ಹೊಂದುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

NEWS DESK

TIMES OF BENGALURU