ಚುನಾವಣೆ ಮುಂದೂಡಲು ಸಾಧ್ಯವಿಲ್ಲ

ಬೆಂಗಳೂರು: ಏಪ್ರಿಲ್ 27ರಂದು ರಾಜ್ಯದ 9 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಆದ್ರೆ, ಕೊರೊನಾ ತೀವ್ರತೆಯ ನಡುವೆ ಚುನಾವಣೆ ನಡೆಸುವುದು ಸರಿಯಲ್ಲ, ಮುಂದೂಡುವಂತೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾ ಮಾಡಿದೆ.

ಅಂದ್ಹಾಗೆ, ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ಸಿ. ರೆಡ್ಡಿ ಅವ್ರು ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ಚುನಾವಣೆ ನಡೆಸುವುದು ಸೂಕ್ತವಲ್ಲ ಎಂದು ಆಕ್ಷೇಪಿಸಿ ಮಧ್ಯಂತರ ಅರ್ಜಿ ಸಲ್ಲಿಸಿದ್ರು. ಆ ಅರ್ಜಿಯ ವಿಚಾರಣೆಯನ್ನ ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

NEWS DESK

TIMES OF BEANGALURU