ಸಾರ್ವಜನಿಕ ರಜಾ ದಿನಗಳಲ್ಲೂ ಕರ್ತವ್ಯಕ್ಕೆ ಹಾಜರಾಗಿ

ಬೆಂಗಳೂರು : ನಗರದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿವೆ. ಇಂತಹ ಕೊರೋನಾ ನಿಯಂತ್ರಣಕ್ಕಾಗಿ ಬಿಬಿಎಂಪಿ ಅಧಿಕಾರಿಗಳನ್ನು, ನೌಕರರನ್ನು ನೇಮಿಸಿದೆ. ಈ ನೌಕರರು ಕೊರೋನಾ ನಿಯಂತ್ರಣಕ್ಕಾಗಿ ಸಾರ್ವಜನಿಕ ರಜಾ ದಿನಗಳಲ್ಲೂ ಕರ್ತವ್ಯಕ್ಕೆ ಹಾಜರಾಗಿ, ಕೆಲಸ ನಿರ್ವಹಿಸುವಂತೆ ಬಿಬಿಎಂಪಿ ಆದೇಶಿಸಿದೆ.

ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಬಿಬಿಎಂಪಿಯ ಉಪ ಆಯುಕ್ತರು(ಆಡಳಿತ) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕೋವಿಡ್ -19 ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪಾಲಿಕೆಯು ನಿರಂತರವಾಗಿ ಕಾರ್ಯನಿರ್ವಹಣೆ ಮಾಡುತ್ತಿರುತ್ತದೆ.

NEWS DESK

TIMES OF BENGALURU