ಕರ್ಫ್ಯೂ ಉಲ್ಲಂಘಿಸಿದ್ರೆ ಹುಷಾರ್; ಪೊಲೀಸ್ ಇಲಾಖೆ

ಬೆಂಗಳೂರು: ಕೊರೊನಾ ಸೋಂಕು ಹರಡುವಿಕೆ ತಡೆಗಾಗಿ ಶುಕ್ರವಾರ ರಾತ್ರಿಯಿಂದ ಸೋಮವಾರ ಬೆಳಿಗ್ಗೆವರೆಗೆ ಕರ್ಫ್ಯೂ ಜಾರಿ ಮಾಡಲಾಗಿದ್ದು, ನಿಯಮ ಉಲ್ಲಂಘಿಸುವವರ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲ ರಸ್ತೆಗಳಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ರಾಜ್ಯ ಮೀಸಲು ಪಡೆಯ ಪೊಲೀಸರನ್ನು ಹಾಗೂ ಸ್ವಯಂಸೇವಕರನ್ನೂ ಭದ್ರತೆಗಾಗಿ ಬಳಸಿಕೊಳ್ಳಲಾಗುತ್ತಿದೆ.

ಆಯಾ ವಿಭಾಗಗಳ ಭದ್ರತೆ ಹಾಗೂ ಇತರೆ ಕ್ರಮಗಳ ಜವಾಬ್ದಾರಿಯನ್ನು ಡಿಸಿಪಿಗಳಿಗೆ ವಹಿಸಲಾಗಿದೆ. ಎಸಿಪಿ ಹಾಗೂ ಇನ್‌ಸ್ಪೆಕ್ಟರ್‌ಗಳ ಸಭೆ ನಡೆಸಿರುವ ಡಿಸಿಪಿಗಳು, ಪ್ರತಿ ಠಾಣೆ ವ್ಯಾಪ್ತಿಯಲ್ಲೂ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದಾರೆ.

NEWS DESK

TIMES OF BENGALURU