ಕ್ಯಾಬಿನೆಟ್ ಮೀಟಿಂಗ್ ಕರೆದ ಸಿಎಂ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಮಹಾಮಾರಿಯಿಂದ ಉದ್ಭಿವಿಸಿರುವ ಆತಂಕದ ಪರಿಸ್ಥಿತಿ ನಿವಾರಿಸುವ ನಿಟ್ಟಿನಲ್ಲಿ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಲಾಗಿದೆ. ಸರ್ಕಾರ ಹೇರಿರುವ ನೈಟ್‌ ಕರ್ಫ್ಯೂ ಹಾಗೂ ವೀಕೆಂಡ್‌ ಕರ್ಫ್ಯೂಗೆ ಜನರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಲ್ಲರೂ ತಮ್ಮ ತಮ್ಮ ಮನೆಗಳಲ್ಲೇ ಉಳಿದುಕೊಂಡಿದ್ದಾರೆ.

ಹೀಗಿರುವಾಗ ಸೋಮವಾರ ಸಂಜೆ ನಾಲ್ಕು ಗಂಟೆಗೆ ಕ್ಯಾಬಿನೆಟ್‌ ಮೀಟಿಂಗ್ ನಡೆಯಲಿದ್ದು, ಈ ವೇಳೆ ಸಚಿವರು ಮೂರು ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ.  ಸೋಮವಾರ ಈ ಕ್ಯಾಬಿನೆಟ್‌ ಸಭೆಯಲ್ಲಿ, ಸಿಎಂ ವಾರ ಪೂರ್ತಿ ಕರ್ಪ್ಯೂ ವಿಸ್ತರಣೆ ಬಗ್ಗೆ ಸಚಿವರ ಅಭಿಪ್ರಾಯ ಕೇಳಲಿದ್ದು, ಮತ್ತಷ್ಟು ಕಟ್ಟು ನಿಟ್ಟಿನ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

NEWS DESK

TIMES OF BENGALURU