ಮಹಾನಗರಿಯಲ್ಲಿ ಮಳೆರಾಯನ ಆರ್ಭಟ

ಬೆಂಗಳೂರು : ಕಳೆದ ಮೂರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ನಿನ್ನೆ ಕೂಡ ವರುಣಾನ ಅರ್ಭಟ ಹೆಚ್ಚಾಗಿದೆ. ರಾಜಧಾನಿಯಲ್ಲಿ ಸಂಜೆ ಮತ್ತು ತಡ ರಾತ್ರಿ ಸುರಿದ ಭಾರಿ ಮಳೆಗೆ ಜನರು ಹೈರಾಣಾಗಿದ್ದಾರೆ. ವಿಕೇಂಡ್​ ಲಾಕ್​ಡೌನ್​ ಹಿನ್ನೆಲೆಯಲ್ಲಿ ಬಸ್​ಗಳ ಸಂಖ್ಯೆ ಕೂಡ ಗಣನೀಯವಾಗಿ ಕಡಿಮೆಯಾಗಿದ್ದು,

ಮಳೆ ಶುರುವಾಗಿದ್ದರಿಂದ ಜನ ಸಂಕಷ್ಟ ಅನುಭವಿಸಬೇಕಾಯಿತು. ಮೆಜೆಸ್ಟಿಕ್​, ಗಾಂಧಿನಗರ, ಯಶವಂತಪುರ, ದಾಸರಹಳ್ಳಿ, ರಾಜಾಜಿನಗರ, ಬಸವೇಶ್ವರನಗರ, ವಿಲ್ಸನ್​ ಗಾರ್ಡನ್​, ಶಾಂತಿ ನಗರ, ಕೋರಮಂಗಲ ಸೇರಿದಂತೆ ಹಲವೆಡೆ ಮಳೆಗೆ ಟ್ರಾಫಿಕ್​ ಸಮಸ್ಯೆ ಉಂಟಾಗಿದೆ.

NEWS DESK

TIMES OF BENGALURU