ಸಿಟಿ ರೌಂಡ್ಸ್ ಹಾಕಿದ ಗೃಹ ಸಚಿವರು

ಬೆಂಗಳೂರು: ಕೋವಿಡ್ ಹರಡುವುದನ್ನು ತಡೆಯಲು ವೀಕೆಂಡ್ ಕರ್ಫ್ಯೂ ಮಾಡಿರುವ ಹಿನ್ನೆಲೆಯಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿದರು. ವೀಕೆಂಡ್ ಕರ್ಫ್ಯೂಗಾಗಿ ಜಾರಿಗೊಳಿಸಲಾಗಿರುವ ಬಿಗಿ ಕ್ರಮಗಳನ್ನು ಪರಿಶೀಲಿಸಿದರು.

ಸದಾ ಜನಜಂಗುಳಿ ಇರುವ ಕೆಆರ್ ಮಾರುಕಟ್ಟೆ ಪ್ರದೇಶಕ್ಕೆ ಮೊದಲು ಭೇಟಿ ಮಾಡಿ ಅಲ್ಲಿನ ವ್ಯವಸ್ಥೆ ಗಮನಿಸಿದರು. ಇದೇ ಸಂದರ್ಭದಲ್ಲಿ ಮಹಿಳೆಯೊಬ್ಬರು ಮಾಸ್ಕ್ ಧರಿಸದೆ ಇರುವುದನ್ನು ಗಮನಿಸಿದ ಸಚಿವರು, ಆ ಮಹಿಳೆಗೆ ಮಾಸ್ಕ್ ನೀಡಿ ಅದನ್ನು ಹಾಕಿಕೊಳ್ಳುವಂತೆ ಸಲಹೆ ನೀಡಿದರು. ಮಾಸ್ಕ್ ಬಳಕೆ ಮಾಡಿ ಕೊರೊನಾದಿಂದ ದೂರ ಇರುವಂತೆ ಬಳಕೆ ಆ ಮಹಿಳೆಗೆ ಸಚಿವರು ಮನವರಿಕೆ ಮಾಡಿಕೊಟ್ಟರು.

NEWS DESK

TIMES OF BENGALURU