ಅಂತ್ಯಕ್ರಿಯೆಯಲ್ಲಿ ಐದು  ಜನರಿಗಷ್ಟೇ ಅವಕಾಶ 

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಉಲ್ಬಣವಾಗುತ್ತಿದ್ದು , ಈ ಹಿನ್ನೆಲೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುತ್ತಿರುವ ರಾಜ್ಯ ಸರ್ಕಾರ ಇದೀಗ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಐದು ಮಂದಿಗೆ ಮಾತ್ರ ಅವಕಾಶ ನೀಡಿ ಹೊಸ ಆದೇಶ ಹೊರಡಿಸಿದೆ.

ಕರ್ಪ್ಯೂ ಜಾರಿ ಮಾಡುವ ಸಂದರ್ಭದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ಸಂದರ್ಭದಲ್ಲಿ 20 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಿತ್ತು. ಸದ್ಯ, ಇದನ್ನು ಮತ್ತಷ್ಟು ಕಡಿಮೆ ಮಾಡಿ ಮಾಡಲಾಗಿದೆ. ಮಾರ್ಗಸೂಚಿ ಪಾಲಿಸಿ ಐದು ಮಂದಿ ಮಾತ್ರ ಭಾಗಿಯಾಗಬೇಕು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

NEWS DESK

TIMES OF BENGALURU