ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಕೋವಿಡ್19 ಸೋಂಕು ವ್ಯಾಪಕವಾಗಿ ಪಸರಿಸುತ್ತಿರುವುದರಿಂದ ಏಪ್ರಿಲ್ 27 ರಿಂದ 14 ದಿನ ಕರ್ನಾಟಕವನ್ನು ವೀಕೆಂಡ್ ಕಫ್ರ್ಯೂನಂತೆ ಲಾಕ್?ಡೌನ್ ಮಾಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಂಡಿದ್ದಾರೆ.
ಮಂಗಳವಾರ ಸಂಜೆಯಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ಅವರು ಹೇಳಿದ್ದಾರೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದ್ದು ಆ ನಂತರ ಕಟ್ಟುನಿಟ್ಟಿನ ಲಾಕ್?ಡೌನ್ ಮಾಡಲು ತೀರ್ಮಾನಿಸಲಾಗಿದೆ. ಅಲ್ಲದೇ ರಾಜ್ಯದ್ಯಂತ ಉಚಿತ ಲಸಿಕೆ ವಿತರಣೆಗೆ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
NEWS DESK
TIMES OF BENGALURU