ನಾಳೆಯಿಂದ ಸಾರಿಗೆ ಸಂಚಾರ ಸಂಪೂರ್ಣ ಬಂದ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ನಾಳೆಯಿಂದ 14 ದಿನಗಳ ಕಾಲ ಲಾಕ್ ಡೌನ್ ಮಾದರಿಯಲ್ಲಿ ಕಠಿಣ ನಿಯಮ ಜಾರಿ ಮಾಡಿದ್ದು, ಸಾರಿಗೆ ಸಂಚಾರ ಕೂಡ ಸಂಪೂರ್ಣ ಬಂದ್ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಸಾರಿಗೆ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಸೇರಿದಂತೆ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳಲಿದೆ. ಅಷ್ಟೇ ಅಲ್ಲ ಬೆಂಗಳೂರಿನಲ್ಲಿ ಬಿಎಂಟಿಸಿ, ಮೆಟ್ರೋ ಸಂಚಾರ ಕೂಡ ಬಂದ್ ಆಗಲಿದೆ ಎಂದರು ಹೇಳಿದರು. ಬಸ್, ಕ್ಯಾಬ್, ಆಟೋ, ಖಾಸಗಿ ವಾಹನಗಳ ಸಂಚಾರಕ್ಕೂ ನಿಷೇಧ ಹೇರಲಾಗಿದೆ ನಾಳೆ ರಾತ್ರಿಯಿಂದಲೇ ಈ ನಿಯಮ ಜಾರಿಗೆ ಬರಲಿದೆ ಎಂದು ತಿಳಿಸಿದರು.

NEWS DESK

TIMES OF BENGALURU