ವೀಕೆಂಡ್ ಕರ್ಫ್ಯೂ; ಹಸೆಮಣೆಯೇರಿದ 2000 ಜೋಡಿಗಳು

ಬೆಂಗಳೂರು: ವಾರಾಂತ್ಯದ ಕರ್ಫ್ಯೂ ನಡುವೆಯೂ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುಮಾರು 2 ಸಾವಿರಕ್ಕೂ ಹೆಚ್ಚು ಜೋಡಿಗಳು ಸರ್ಕಾರದ ಷರತ್ತುಬದ್ಧ ಅನುಮತಿಯೊಂದಿಗೆ ಭಾನುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ರಜಾ ದಿನವಾದ ಕಾರಣ ರಾಜ್ಯಾದ್ಯಂತ ಭಾರೀ ಸಂಖ್ಯೆಯಲ್ಲಿ ಮದುವೆಗಾಗಿ ಕಲ್ಯಾಣಮಂಟಪ, ದೇಗುಲಗಳ ಛತ್ರಗಳು ಬುಕ್‌ ಆಗಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದರೂ ಮಂಗಲ ಕಾರ್ಯಕ್ಕೆ ಅಡ್ಡಿಯಾಗಬಾರದು ಎನ್ನುವ ಕಾರಣಕ್ಕೆ ಮದುವೆ ಕಾರ್ಯಕ್ಕೆ ಷರತ್ತುಬದ್ಧ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತದ ಅನುಮತಿ ಪಡೆದು 50 ಮಂದಿಯ ಮಿತಿಗೊಳಪಟ್ಟು ರಾಜ್ಯಾದ್ಯಂತ ಮದುವೆ ಕಾರ್ಯಕ್ರಮಗಳು ನಡೆದವು.

NEWS DESK

TIMES OF BENGALURU