ಆರು ತಿಂಗಳು ಮುಂದೂಡಿಕೆಯಾದ ಚುನಾವಣೆ

ಬೆಂಗಳೂರು : ಕೊರೊನಾ ವೈರಸ್ ಹಾವಳಿ ಜೋರಾಗಿರುವ ಕಾರಣ ರಾಜ್ಯದ ಬಿಬಿಎಂಪಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಎಲ್ಲಾ ಚುನಾವಣೆಗಳನ್ನು ಮುಂದೂಡಲು ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ನಿರ್ಧರಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಿದೆ.

ವಿಧಾನಸೌಧದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ, ಈಗಾಗಲೇ ಚುನಾವಣೆ ಘೋಷಣೆಯಾಗಿರುವ ಬಳ್ಳಾರಿ ಮತ್ತು ರಾಮನಗರ ನಗರಸಭೆ ಚುನಾವಣೆಗಳು ನಡೆಯುತ್ತವೆ. ಅದರ ನಂತರದ ಚುನಾವಣೆಗಳನ್ನು ಆರು ತಿಂಗಳು ಮುಂದೂಡಿಕೆಗೆ ಮಾತ್ರ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದರು.

NEWS DESK

TIMES OF BENGALURU