ಬೆಂಗಳೂರು : ದೇಶದ ಮೊಟ್ಟ ಮೊದಲ ಸಂಪೂರ್ಣ ಹವಾನಿಯಂತ್ರಿತ ಸೌಲಭ್ಯದ ರೈಲು ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ನಗರದ ಬೈಯಪ್ಪನಹಳ್ಳಿಯ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನೀರಿನಲ್ಲಿ ಮುಳುಗಿ ಹೋಗಿದ್ದ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ಶುಕ್ರವಾರ ರಾತ್ರಿ ಸುರಿದ ಮಳೆಗೆ ನಿಲ್ದಾಣದ ಛಾವಣಿಗಳಲ್ಲಿ ನೀರು ಸೋರಿದ ಪರಿಣಾಮ ನಿಲ್ದಾಣದೊಳಗೆ ಪ್ಲಾಟ್ ಫಾರಂ 1 ಮತ್ತು 7ನ್ನು ಸಂಪರ್ಕಿಸಲು ನಿರ್ಮಿಸಲಾಗಿರುವ ಸುರಂಗ ಮಾರ್ಗದಲ್ಲಿ ಎರಡು ಅಡಿಗಿಂತ ಹೆಚ್ಚು ಎತ್ತರದಲ್ಲಿ ನೀರು ನಿಂತಿದೆ.
NEWS DESK
TIMES OF BENGALURU