ಸೋಂಕಿತರ ಚಿಕಿತ್ಸೆ ಬಗ್ಗೆ ಆಸ್ಪತ್ರೆಗಳಲ್ಲಿ ಪಾರದರ್ಶಕತೆ ಇರಲಿ 

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಂದ ದಿನಕ್ಕೆ ನೂರಾರು ಜನ ಸಾಯುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಹಿರಿಯ ನಟ ಜಗ್ಗೇಶ್ ಮುಖ್ಯ ಮಂತ್ರಿ ಯಡಿಯೂರಪ್ಪ ಅವರಿಗೆ ಟ್ವೀಟ್ ಮೂಲಕ ಪ್ರಶ್ನೆ ಮಾಡಿ, ಆಸ್ಪತ್ರೆಗಳಲ್ಲಿ ಪಾರದರ್ಶಕತೆ ಇರಲಿ ಎಂದು ಹೇಳಿದ್ದಾರೆ. ಆಸ್ಪತ್ರೆಗೆ ದಾಖಲಾದ ಸೋಂಕಿತರು 2 ರಿಂದ 3 ದಿನಕ್ಕೆ ಸಾಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಏನಾಗುತ್ತಿದೆ ಎಂಬುದು ಸತ್ತವರ ಕುಟುಂಬದವರಿಗೆ ತಿಳಿಯುತ್ತಿಲ್ಲ ಎಂದು ಆಸ್ಪತ್ರೆಗಳ ಬಗ್ಗೆ ಅಸಮಧಾನ ಹೊರ ಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ನಲ್ಲಿ ಬರೆದುಕೊಂಡಿರುವ ನವರಸ ನಾಯಕ ಜಗ್ಗೇಶ್, ಮಾನ್ಯ ಮುಖ್ಯ ಮಂತ್ರಿಗಳ ಗಮನಕ್ಕೆ, ಸಾರ್ ಯಾವು ಕೊರೋನ ರೋಗಿ ಅಡ್ಮಿಟ್ ಆದ 2 ರಿಂದ 3 ದಿನಕ್ಕೆ ಸಾವು ಸಂಭವಿಸುತ್ತಿದೆ (ಸ್ವಂತ ಅನುಭವ). ಯಾವ ಚಿಕಿತ್ಸೆ ನೀಡುತ್ತಾರೆ ಎಂಬುದು ಬಂಧುಗಳಿಗೆ ತಿಳಿಯದು.

ಸಾವಾಗಿದೆ ಎಂದು ತಿಳಿಸುತ್ತಾರೆ. ಆದ್ರೆ ಸತ್ತವರ ಮುಖಸಹಿತ ನೋಡಲಾಗದು. ಬೆರಳೆಣಿಕೆಯಷ್ಟು ಕೆಲ ಸಿಬ್ಬಂದಿ ಹೊರತುಪಡಿಸಿ ತಜ್ನರು ರೋಗಿಯ ಬಗ್ಗೆ ಮಾಹಿತಿ ಪಡೆಯಲು ಸಿಗುವುದಿಲ್ಲ . ಪ್ರತಿ ರೋಗಿಯ ಮನೆಯವರಿಗೆ ದೂರದಿಂದ ನೋಡಲು ಅವಕಾಶ ಮಾಡಕೊಡಬೇಕು. ಇಲ್ಲದಿದ್ದರೆ ಒಳಗೆ ನಡೆಯುವ ವಿಷಯ ಹೊರಗೆ ಅರಿವಾಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

NEWS DESK

TIMES OF BENGALURU