1200 ಬಸ್‍ಗಳ ಸಂಚಾರಕ್ಕೆ ಸರ್ಕಾರದಿಂದ ವ್ಯೆವಸ್ಥೆ

ಬೆಂಗಳೂರು :ಇಂದು ರಾತ್ರಿ 9 ಗಂಟೆಯಿಂದ ಕೋವಿಡ್‌ ಕರ್ಫ್ಯೂ ಆರಂಭವಾಗಲಿದ್ದು ಜನರಿಗೆ ತಮ್ಮ ಊರುಗಳಿಗೆ ತೆರಳಲು ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಹಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಿದೆ.ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಸಾಕಷ್ಟು ಜನರು ತೆರಳುತ್ತಿದ್ದಾರೆ. ಕರ್ಫ್ಯೂ ಘೋಷಣೆಯಾದ ಬೆನ್ನಲ್ಲೇ ಜನರು ವಲಸೆ ಶುರುವಾಗಿದೆ. ಇದರಿಂದ ಜನರಿಗೆ ಅನುಕೂಲವಾಗಲು 12 ಸಾವಿರಕ್ಕೂ ಅಧಿಕ ಬಸ್‌ಗಳ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಕಲ್ಪಿಸಿದೆ.3 ಸಾರಿಗೆ ನಿಗಮಗಳಿಂದ ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿದೆ. ಈ ಬಸ್ಸುಗಳು ಬೆಂಗಳೂರಿನಿಂದ ಹೊರಗಡೆ ಮತ್ತು ಬೇರೆ ಬೇರೆ ಪ್ರದೇಶಗಳಿಂದ ಬೆಂಗಳೂರಿಗೆ ಮತ್ತು ಇತರ ಪ್ರದೇಶಗಳಿಗೆ ಸಂಚರಿಸಲಿವೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

NEWS DESK

TIMES OF BENGALURU